School Holiday: ಭಾರೀ ಮಳೆಯ ಕಾರಣ ರೆಡ್‌ ಅಲರ್ಟ್‌ ಘೋಷಣೆ: ಈ ಜಿಲ್ಲೆಯ ಶಾಲೆಗಳಿಗೆ ನಾಳೆ, ನಾಡಿದ್ದು ರಜೆ

Share the Article

School Holiday: ಕೊಡಗು ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದರೂ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ಪ್ರವಾಹದ ಆತಂಕದಿಂದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಗುರುವಾರ, ಶುಕ್ರವಾರ (29,30) ರಂದು ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ 2 ದಿನ ರಜೆ ನೀಡಿ ಡಿಸಿ ವೆಂಕಟರಾಜಾ ಆದೇಶಿಸಿದ್ದಾರೆ.

ಭಾರೀ ಮಳೆ ಸಾಧ್ಯತೆಯ ಕಾರಣ ಜಿಲ್ಲೆಯಲ್ಲಿ ನಾಳೆ ರೆಡ್‌ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನೊಂದೆಡೆ ಜಿಲ್ಲೆಗೆ ಎನ್‌ಡಿಆರ್‌ಎಫ್‌ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧ ಎಂದು ಹೇಳಿದೆ.

Comments are closed.