Guarantee : ಜುಲೈ ನಿಂದ ಇಂಥವರಿಗೆ ಸಿಗಲ್ಲ ‘ಗ್ಯಾರೆಂಟಿ ಸ್ಕೀಮ್ಸ್’!!

Guarantee: ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುವಾಗ ಪಂಚ ಗ್ಯಾರಂಟಿಗಳನ್ನು ಘೋಷಿಸಿ, ಅವುಗಳನ್ನು ಜಾರಿಗೊಳಿಸಿತು. ನುಡಿದಂತೆ ನಡೆದುಕೊಂಡಿತು. ಆದರೆ ಈಗ ಸರ್ಕಾರ ಜುಲೈ ತಿಂಗಳಿನಿಂದ ಇಂಥವರಿಗೆ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲು ತೀರ್ಮಾನಿಸಿದೆ.
ಹೌದು, ಸರ್ಕಾರ ಬಡವರಿಗಾಗಿ ಈ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ರಾಜ್ಯದಲ್ಲಿ ಅನೇಕ ಅನರ್ಹರು ಕೂಡ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಹೀಗಾಗಿ ಇದೀಗ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಲ್ಲಿ ಅನರ್ಹ ಫಲಾನುಭವಿಗಳಿಗೂ ಯೋಜನೆಯ ಲಾಭಹೋಗುತ್ತಿದೆ. ಈ ಕುರಿತು ರಾಜ್ಯಾದ್ಯಂತ ತನಿಖೆ ಮಾಡಿಸಿ ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಲಾಭ ತಲುಪದಂತೆ ಕಡಿವಾಣ ಹಾಕಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.
Comments are closed.