Mangalore: ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ: ಮೂವರು ಆರೋಪಿಗಳ ಬಂಧನ

Mangalore: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ 27 ರಂದು ಅಬ್ದುಲ್ ರಹಿಮಾನ್ ಅವರನ್ನು ಹತ್ಯೆ ಮಾಡಿದ ಹಾಗೂ ಜೊತೆಗಿದ್ದ ಕಲಂಧರ್ ಶಾಫಿ ಮೇಲೆ ಹಲ್ಲೆ ಮಾಡಿದ್ದ ಮೂವರು ಆರೋಪಿಗಳನ್ನು ಬಂಧನ ಮಾಡಿರುವ ಕುರಿತು ಪೊಲೀಸರು ಖಚಿತ ಪಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ (21) ಅಮ್ಮುಂಜೆ ಗ್ರಾಮದ ಶಿವಾಜಿ ನಗರ ಭದ್ರಾಕಾಳಿ ದೇವಸ್ಥಾನ ಹತ್ತಿರದ ನಿವಾಸಿ ಪೃಥ್ವಿರಾಜ್ (21) ಹಾಗೂ ಬಂಟ್ವಾಳ ನಿವಾಸಿ ಚಿಂತನ್ (19) ಬಂಧಿತರು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ತಿಳಿಸಿದ್ದಾರೆ.
ಬೈಕಿನಲ್ಲಿ ಬಂದು ಅಬ್ದುಲ್ ರಹಿಮಾನ್ ಮೇಲೆ ಹಲ್ಲೆ ಮಾಡಿದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಬಂಧಿತರಾಗಿರುವ ಮೂವರೂ ಈ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಯತೀಶ್ ಎನ್ ಹೇಳಿದರು.
ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದವರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
Comments are closed.