Scholarship: ಪ್ರತಿಭಾ ಪುರಸ್ಕಾರ: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ!

Scholarship: ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಉಡುಪಿ ವತಿಯಿಂದ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (Scholarship) ನೀಡಿ ಗೌರವಿಸಲು ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಸಂಘದ ಜಿಲ್ಲೆ ಅಥವಾ ತಾಲೂಕು ಅಧ್ಯಕ್ಷರಿಂದ ದೃಢೀಕರಿಸಿ ಆನ್ಲೈನ್ ನಲ್ಲಿ ಅಪ್ಲೋಡ್ ಮಾಡಬೇಕು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೆ ದಿನಕರ ಶೆಟ್ಟಿ ಅಂಪಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.