Udupi: ಉಡುಪಿ: ವಖ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ 30ಕ್ಕೆ ಪ್ರತಿಭಟನೆ!

Share the Article

Udupi: ಉಡುಪಿ (Udupi) ಜಿಲ್ಲಾ ‘ವಖ್ಫ್ ಉಳಿಸಿ ಸಂವಿಧಾನ ರಕ್ಷಿಸಿ’ ಹೋರಾಟ ಸಮಿತಿಯ ನೇತೃತ್ವದಲ್ಲಿ ಮೇ 30ರಂದು ಶುಕ್ರವಾರ ಸಂಜೆ 4ಗಂಟೆಗೆ ಉಡುಪಿ ಮಿಷನ್ ಕಾಂಪೌಂಡ್‌ನಲ್ಲಿ ವಖ್ಫ್ ತಿದ್ದುಪಡಿ ಕಾಯ್ದೆ -2025ರ ವಿರುದ್ಧ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಅಬ್ದುಲ್ ರೆಹಮಾನ್ ಕಲ್ಕಟ್ಟ ತಿಳಿಸಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ಹಿಂದೆ ಮೇ 13ರಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಪಾಕಿಸ್ತಾನ ವಿರುದ್ಧದ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ, ಸೈನಿಕರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಮುಂದೂಡಲಾಗಿತ್ತು, ಅದನ್ನೀಗ ಮೇ 30ರಂದು ನಡೆಸಲು ಉದ್ದೇಶಿಸಲಾಗಿದೆ ಎಂದರು.

Comments are closed.