B K Hariprasad: ಮಂಗಳೂರಿನ ಪರಿಸ್ಥಿತಿ ಅವಲೋಕನ: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್‌ಗೆ ಜವಾಬ್ದಾರಿ ನೀಡಿದ ಸಿಎಂ

B K Hariprasad: ಮಂಗಳೂರಿನಲ್ಲಿ ಎರಡು ತಿಂಗಳ ಒಳಗಾಗಿ ಮೂರು ಕೊಲೆಗಳು ನಡೆದ ಬಳಿಕ, ದಕ್ಷಿಣ ಕನ್ನಡ ಜಿಲ್ಲೆಯ ಪರಿಸ್ಥಿತಿ ಅವಲೋಕಿಸುವ ಜವಾಬ್ದಾರಿಯನ್ನು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್‌ಗೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದರು. “ಹರಿಪ್ರಸಾದ್‌ಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿ ಸೌಹಾರ್ದತೆ ಸೃಷ್ಟಿಯಾಗಬೇಕು. ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಯಾವುದೇ ದ್ವೇಷ ಇರಬಾರದು” ಎಂದು ಸಿದ್ದರಾಮಯ್ಯ ಹೇಳಿದರು.

ಈ ವೇಳೆ ರಾಜಕೀಯ ಚರ್ಚೆ ಏನೂ ಮಾಡಿಲ್ಲ. ಅದರ ಬದಲಾಗಿ ಕೆಲವೊಂದು ಬೇರೆ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದೇವೆ. ಅದರಲ್ಲಿ ಪ್ರಮುಖವಾಗಿ ಮಂಗಳೂರು ಗಲಭೆ ವಿಚಾರ ಚರ್ಚೆ ಮಾಡಲಾಗಿದೆ. ಕರಾವಳಿಯಲ್ಲಿ ಸೌಹಾರ್ದತೆ ಸೃಷ್ಟಿ ಆಗಬೇಕು. ಹಾಗಾಗಿ ಶೀಘ್ರದಲ್ಲಿ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಮಂಗಳೂರು ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
Comments are closed.