Uppinangady: ಇಂದಿನಿಂದ ಉಪ್ಪಿನಂಗಡಿ, ಮಾಣಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ: ಜೂ.2ರಿಂದ ಕಲ್ಲಡ್ಕ ಪ್ಲೈಓವರ್ ಸಂಚಾರಕ್ಕೆ ಸಂಸದ ಚೌಟ ಸೂಚನೆ

Share the Article

Uppinangady: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್‌-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್‌ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಇಂದಿನಿಂದ ಹೆದ್ದಾರಿ ಪ್ರಾಧಿಕಾರವು ಮಾಣಿ ಬಳಿಯ ವೆಹಿಕಲ್ ಅಂಡರ್ ಪಾಸ್(ವಿಯುಪಿ) ಹಾಗೂ ಉಪ್ಪಿನಂಗಡಿ (Uppinangady) ಬಳಿಯ ವೆಹಿಕಲ್ ಅಂಡರ್ ಪಾಸ್ ದ್ವಿ ಪಥವನ್ನು ಸಂಚಾರಕ್ಕೆ ಮುಕ್ತಗೊಳಿಸಿದೆ. ಅಲ್ಲದೆ, ಜೂ. 2ರಿಂದ ಕಲ್ಲಡ್ಕ ಪೇಟೆಯಲ್ಲಿರುವ ಮೇಲುರಸ್ತೆ (ಫ್ಲೈಓವರ್‌)ಯಲ್ಲಿ ಎಡಭಾಗವನ್ನು ವಾಹನಗಳ ಸಂಚಾರಕ್ಕೆ ತೆರವುಗೊಳಿಸಲಾಗುತ್ತದೆ.

ಇನ್ನು ತುಂಬೆಯಲ್ಲಿ ನೀರು ನಿಲ್ಲುವ ಸಮಸ್ಯೆ ಪರಿಹರಿಸುವಂತೆಯೂ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗಿತ್ತು. ಇದಕ್ಕೆ ಪರಿಹಾರವಾಗಿ ಎನ್.ಹೆಚ್.ಎ.ಐ ಪೈಪ್ ಅಳವಡಿಸಿದ್ದು, ಕಾಮಗಾರಿ ಪೂರ್ಣಗೊಂಡರೆ ಇಲ್ಲಿಯೂ ಮಳೆಗಾಲದಲ್ಲಿ ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಆ ಮೂಲಕ, ಕಾಮಗಾರಿ ಪ್ರಗತಿಯಲ್ಲಿರುವ ಜಿಲ್ಲೆಯ ಎಲ್ಲ ಹೆದ್ದಾರಿಗಳಲ್ಲಿಯೂ ಮಳೆಗಾಲದ ಸಮಸ್ಯೆಯಿಂದ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮದ ಜತೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಕ್ಕೆ ಸೂಚಿಸಿರುವುದಾಗಿ ಕ್ಯಾ. ಚೌಟ ಹೇಳಿದ್ದಾರೆ.

Comments are closed.