Suicide: ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ!

Suicide: ಕೆ.ಎಸ್. ಆರ್.ಟಿ. ಸಿ. ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಇಂದು ರಾತ್ರಿ ಕುಶಾಲನಗರದಲ್ಲಿ ನಡೆದಿದೆ.

ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖರ್ ಎಂಬಾತ ಸೋಮವಾರಪೇಟೆ ಬಾರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಅವಿವಾಹಿತನಾಗಿದ್ದು ಕಳೆದ ಒಂದು ವಾರದಿಂದ ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ತಂಗುತ್ತಿದ್ದ ಎನ್ನಲಾಗಿದೆ. ಗುರುವಾರ ಸಂಜೆ ನಿಲ್ದಾಣಕ್ಕೆ ಬರುತ್ತಿದ್ದ ಬಸ್ ಮುಂದೆ ಬೀಳಲು ಪ್ರಯತ್ನ ನಡೆಸಿ ವಿಫಲಗೊಂಡಿದ್ದ. ನಂತರ ಇಂದಿರಾ ಕ್ಯಾಂಟಿನ್ ಮುಂಭಾಗ ರಾತ್ರಿ 8 ಗಂಟೆಗೆ ಮತ್ತೆ ಈತ ಬಸ್ ಕೆಳಗೆ ಹಾರಿ ಜೀವ ಕಳೆದುಕೊಂಡಿದ್ದಾನೆ.
Comments are closed.