Mangaluru : ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ – ಮತ್ತಿಬ್ಬರ ಬಂಧನ, ಬಂದಿತರ ಸಂಖ್ಯೆ 5 ಕ್ಕೆ ಏರಿಕೆ!!

Mangaluru : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿನ್ನೆ ಮೂವರನ್ನು ಬಂಧಿಸಿದ್ದರು. ಈಗ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದು, ಬಂದಿದ್ದರೆ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಹೌದು, ಈ ಹಿಂದೆ ಮೂವರನ್ನು ಬಂಡಿಸಿದ್ದ ಪೊಲೀಸರು ಇದೀಗ ಮತ್ತೆ ಇಬ್ಬರನ್ನೂ ಬಂಧಿಸಲಾಗಿದೆ. ಬಂಧಿತರನ್ನು ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಎಂದು ಹೇಳಲಾಗುತ್ತಿದೆ.
ಆರೋಪಿಗಳ ಪತ್ತೆಯಾಗಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಅವರನ್ನು ತನಿಖಾಧಿರಿಯನ್ನಾಗಿ ನೇಮಿಸಲಾಗಿತ್ತು. ಆರೋಪಿಗಳ ಪತ್ತೆಗಾಗಿ ಅವರ ನೇತೃತ್ವದಲ್ಲಿ ಐದು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದ್ದು,.ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.
Comments are closed.