Vittla: ವಿಟ್ಲ: ಬಾಕ್ಸೆಟ್ ಮಣ್ಣು ಸಾಗಾಟದ ಲಾರಿಗೆ ಬೈಕ್ ಡಿಕ್ಕಿ; ಓರ್ವ ಮೃತ್ಯು, ಇನ್ನೊರ್ವ ಗಂಭೀರ!

Vittla: ಬೈಕ್ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳಪದವು ಎಂಬಲ್ಲಿ ನಡೆದಿದೆ.

ಒಕ್ಕೆತ್ತೂರು ಮೂಲದ ಇಬ್ಬರು ಯುವಕರು ಮಂಗಳಪದವು ಕಡೆಗೆ ತೆರಳುತ್ತಿದ್ದ ವೇಳೆ ಕನ್ಯಾನ ಕಡೆಯಿಂದ ಬಾಕ್ಸೆಟ್ ಮಣ್ಣು ಸಾಗಾಟ ನಡೆಯುತ್ತಿದೆ. ಅದರ ಚಾಲಕ ಮಂಗಳಪದವು ಎಂಬಲ್ಲಿ ರಸ್ತೆಯಲ್ಲಿಯೇ ಲಾರಿ ನಿಲ್ಲಿಸಿದ್ದು, ಅದಕ್ಕೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಅಪಘಾತಕ್ಕೊಳಗಾದವರನ್ನು ಒಕ್ಕೆತ್ತೂರಿನ ಫಾರೀಸ್ ಮತ್ತು ಇರ್ಫಾನ್ ಎನ್ನಲಾಗಿದೆ.
Comments are closed.