Bengaluru : ಸಲೂನ್ ಗೆ ನುಗ್ಗಿ ಹಲ್ಲೆ – ಖತರ್ನಾಕ್ ಲೇಡಿ ಗ್ಯಾಂಗ್ ಅರೆಸ್ಟ್!!

Share the Article

Bengaluru : ಲೇಡಿ ಗ್ಯಾಂಗ್ ಒಂದು ಸಲೂನ್ ಗೆ ನುಗ್ಗಿ ದಾಂಧಲೆ ನಡೆಸಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ. ಇದೀಗ ಈ ಲೇಡಿ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಸಂಜು (40) ಎಂಬುವವರು ಕೋಡಿಗೆಹಳ್ಳಿ ಬಳಿಯ ಸಾರಾ ಸ್ಪಾನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಸ್ಪಾದಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಕಾರಣಕ್ಕೆ ಸ್ಪಾ ಬಿಟ್ಟು ಸ್ವಂತವಾಗಿ ಸಲೂನ್ ತೆಗೆದು ಜೀವನ ನಡೆಸುತ್ತಿದ್ದರು. ಇದರಿಂದ ಕೋಪಗೊಂಡ ಸ್ಪಾ ಮಾಲಕಿ ನಿಶಾ ತನ್ನ ಗ್ಯಾಂಗ್ ಕಟ್ಟಿಕೊಂಡು ಬಂದು ಸಲೂನ್ ಮೇಲೆ ದಾಳಿ ನಡೆಸಿದ್ದು, ಸಂಜು ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ತನ್ನ ಕಾರಿನಲ್ಲಿ ಸಂಜುನನ್ನು ಎತ್ತಿಹಾಕಿಕೊಂಡು ಕಿಡ್ನ್ಯಾಪ್ ಮಾಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸಾರಾ ಸ್ಪಾ ಮಾಲಕಿ ನಿಶಾ, ಆಕೆಯ ಸ್ನೇಹಿತೆ ಕಾವ್ಯ, ಹಾಗೂ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಸದ್ಯ ಸಂಜು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments are closed.