Mangalore: ಕಾಂಗ್ರೆಸ್ ಹುದ್ದೆಗೆ ರಾಜೀನಾಮೆ ಕೊಟ್ಟ ಮುಸ್ಲಿಂ ನಾಯಕರಿಗೆ ನೋಟಿಸ್

Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಘಟನೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದು, ಈ ಕುರಿತು ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ ಮುಸ್ಲಿಂ ನಾಯಕರಿಗೆ ಪಕ್ಷದಿಂದ ನೋಟಿಸ್ ನೀಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ನೋಟಿಸ್ ನೀಡಿದ್ದಾರೆ.

ಪಕ್ಷದ ಹಿರಿಯ ನಾಯಕರು ರಾಜೀನಾಮೆ ನೀಡುವ ಕುರಿತು ದುಡುಕಿನ ಕ್ರಮ ಕೈಗೊಳ್ಳದಂತೆ ತಿಳಿಸಿದರೂ ಸಭೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶಾಹುಲ್ ಹಮೀದ್, ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಯಾರೂ ಮಾತನಾಡಬೇಡಿ ಎಂದು ಹೇಳಿಕೆ ನೀಡಿದ್ದ ಮಾಜಿ ಮೇಯರ್ ಕೆ.ಅಶ್ರಫ್ ಅವರಿಗೂ ನೋಟಿಸನ್ನು ನೀಡಲಾಗಿರುವ ಕುರಿತು ವರದಿಯಾಗಿದೆ.
Comments are closed.