Mangalore: ಸುದ್ದಿಗೋಷ್ಠಿಯಲ್ಲಿ ಸಚಿವ ಗುಂಡೂರಾವ್‌ಗೆ ಮುಸ್ಲಿಂ ಮುಖಂಡನಿಂದ ತರಾಟೆ

Mangalore: ಮಂಗಳೂರಿನ ಸರ್ಕ್ಯೂಟ್‌ಹೌಸ್‌ನಲ್ಲಿ ಸುದ್ದಿಗೋಷ್ಠಿ ಇಂದು ನಡೆದಿದ್ದು, ಈ ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಚೋದನಕಾರಿ ಭಾಷಣಗಳ ಕುರಿತು ಮಾತನಾಡುತ್ತಿದ್ದಾಗ, ಕಾಂಗ್ರೆಸ್‌ನ ಸ್ಥಳೀಯ ಮುಸ್ಲಿಂ ಮುಖಂಡರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿರುವ ಕುರಿತು ವರದಿಯಾಗಿದೆ. ಇದರಿಂದ ಸಚಿವರು ಆ ಮುಖಂಡನನ್ನು ಹೊರಗೆ ಕಳುಹಿಸುವಂತೆ ತನ್ನ ಸಿಬ್ಬಂದಿಗಳಿಗೆ ಸೂಚನೆ ನೀಡಿದ ಕುರಿತು ವರದಿಯಾಗಿದೆ.

ಪ್ರಚೋದನಕಾರಿ ಭಾಷಣಗಳ ವಿರುದ್ಧ ಸಚಿವರು ಕಠಿಣ ಕ್ರಮ ಕೈಗೊಳ್ಳುವ ಕುರಿತು ವಿವರ ನೀಡುತ್ತಿದ್ದಾಗ ಮಧ್ಯಪ್ರವೇಶ ಮಾಡಿದ ಮುಸ್ಲಿಂ ಮುಖಂಡರೊಬ್ಬರು, ” ಮೊನ್ನೆ ನಡೆದ ಕೊಲೆಯು ಪ್ರಚೋದನಕಾರಿ ಭಾಷಣದಿಂದಲೇ ಆಗಿದೆ” ಎಂದು ನೇರವಾಗಿ ಆರೋಪ ಮಾಡಿದರು.
ಇದರಿಂದ ಕೋಪಗೊಂಡ ಸಚಿವ ದಿನೇಶ್ ಗುಂಡೂರಾವ್ ಅವರು ಅವನನ್ನು ಹೊರಗೆ ಹಾಕ್ತಿ ಎಂದು ಹೇಳಿದ ಘಟನೆ ನಡೆದಿದೆ. ಕೂಡಲೇ ಅಲ್ಲಿದ್ದ ಸಿಬ್ಬಂದಿಗಳು ಆ ಮುಖಂಡನನ್ನು ಸಭಾಂಗಣದಿಂದ ಹೊರಗೆ ಕಳುಹಿಸಿದ ಘಟನೆ ನಡೆದಿದೆ.
Comments are closed.