Bus pass: ವಿದ್ಯಾರ್ಥಿಗಳಿಗೆ KSRTC ಬಸ್ ಪಾಸ್ ವಿತರಣೆ ಆರಂಭ!

Bus pass: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿದ್ಯಾರ್ಥಿ ಬಸ್ ಪಾಸ್( Bus pass) ಪಡೆಯಲು ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್ಗಳನ್ನು ವಿತರಿಸಲಾಗುತ್ತಿದ್ದು, ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices/ ನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಆನ್ಲೈನ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ ಎಂದು ತಿಳಿಸಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್ಗಾಗಿ ಅರ್ಜಿ ಸಲ್ಲಿಸಲು Declaration Form ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವೆಬ್ಸೈಟ್ನಲ್ಲಿ https://ksrtc.karnataka.gov.in/studentpass ಡೌನ್ ಲೋಡ್ ಮಾಡಿಕೊಳ್ಳುವುದು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಪಾಸ್ ಕೌಂಟರ್ ಆಯ್ಕೆ ಮಾಡಿ ಸಲ್ಲಿಸುವುದು. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್ನ ವಿಳಾಸದ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್ಎಮ್ಎಸ್ ಮುಖಾಂತರ ಕಳುಹಿಸಲಾಗುವುದು.
ವಿದ್ಯಾರ್ಥಿ ಪಾಸುಗಳನ್ನು 2025 ನೇ ಜೂನ್ 2 ರಿಂದ ನಿಗದಿತ ಪಾಸ್ ಕೌಂಟರ್ಗಳಲ್ಲಿ ವಿತರಿಸಲಾಗುವುದು.
ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ಯುಪಿಐ ಮುಖಾಂತರ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.
*ವಿದ್ಯಾರ್ಥಿ ಪಾಸಿನ ದರಗಳು*
*ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ:*
ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ರೂ.150/- ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150.
*ಪ್ರೌಢಶಾಲೆ ವಿದ್ಯಾರ್ಥಿಗಳಿಗೆ*
ಸಾಮಾನ್ಯ ವರ್ಗದ ಬಾಲಕ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ಪಾಸಿದ ದರ ರೂ. 750 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150. ಸಾಮಾನ್ಯ ವರ್ಗದ ಬಾಲಕಿಯ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ಪಾಸಿದ ದರ ರೂ. 550, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150.
*ಕಾಲೇಜು/ ಡಿಪ್ಲೋಮಾ*
*ವಿದ್ಯಾರ್ಥಿಗಳಿಗೆ*
ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ಪಾಸಿದ ದರ ರೂ.1050/- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150.
*ಐಟಿಐ ವಿದ್ಯಾರ್ಥಿಗಳಿಗೆ*
ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 12 ತಿಂಗಳ ಅವಧಿಗೆ ಪಾಸಿದ ದರ ರೂ. ರೂ.1310/- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 160.
*ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ:*
ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ರೂ.1550/- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150.
*ಸಂಜೆ ಕಾಲೇಜು / ಪಿಹೆಚ್ ಡಿ ವಿದ್ಯಾರ್ಥಿಗಳಿಗೆ*
ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 10 ತಿಂಗಳ ಅವಧಿಗೆ ರೂ.1350/- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ. 150 ನಿಗಧಿಪಡಿಸಲಾಗಿದೆ.
Comments are closed.