Bengaluru : ಆಟೋ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಮಹಿಳೆ ಪೊಲೀಸ್ ವಶಕ್ಕೆ!!

Share the Article

Bengaluru : ಬೆಂಗಳೂರಿನಲ್ಲಿ ಸ್ಕೂಟಿಗೆ ಮಿಸ್ ಆಗಿ ಆಟೊ ಟಚ್ ಆಯ್ತು ಎಂದ ಕಾರಣಕ್ಕೆ ಉತ್ತರ ಭಾರತದ ಮಹಿಳೆಯೊಬ್ಬಳು ಬೆಂಗಳೂರಿನ ಆಟೋ ಚಾಲಕನಿಗೆ ನಡು ರಸ್ತೆಯಲ್ಲಿ ಚಪ್ಪಲಿಯಲ್ಲಿ ಹೊಡೆದಿದ್ದಳು. ಇದೀಗ ಯು ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೌದು, ಮಹಿಳೆಯ ವರ್ತನೆ ಕಂಡು ರಾಜ್ಯದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಮಹಿಳೆ ವಿರುದ್ಧ FIR ದಾಖಲಾಗಿದೆ. ಈಗ ಮಹಿಳೆಯನ್ನ ಪೊಲೀಸರು ಠಾಣೆಗೆ ಕರೆದುಕೊಂಡು‌ ಬಂದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ, ಮಹಿಳೆ ಪನ್ಪೂರಿ ಮಿಶ್ರಾ, ಬಿಹಾರ ಮೂಲದ ಮಹಿಳೆ ಬೆಂಗಳೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದಾಳೆ. ಗರ್ಭಿಣಿ ಆಗಿರುವ ಮಹಿಳೆ ಆಸ್ಪತ್ರೆಗೆ ತೆರಳಿ ಬರುತ್ತಿದ್ದಳು.

ಈ ವೇಳೆ ಮಹಿಳೆಯ ದ್ವಿ ಚಕ್ರ ವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿಯಾಗಿತ್ತು. ಇದನ್ನ ಪ್ರಶ್ನಿಸಿದ್ದಕ್ಕೆ ಆಟೋ ಡ್ರೈವರ್ ಬೈದೆ. ಈ ವೇಳೆ ಕೋಪಗೊಂಡು ಚಪ್ಪಲಿಯಿಂದ ಹಲ್ಲೆ ಮಾಡಿದ್ದೇನೆ ಅಂತ ಬೆಳ್ಳಂದೂರು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾಳೆ.

Comments are closed.