Mahesh Joshi: ಕಸಾಪ ಅಧ್ಯಕ್ಷ ಮಹೇಶ್‌ ಜೋಶಿಗೆ ನೀಡಿದ್ದ ಸಚಿವ ಸ್ಥಾನ ವಾಪಸ್‌- ಕಬಾಬ್‌ ಹಂಚಿ ಸಂಭ್ರಮಾಚಾರಣೆ

Share the Article

Mahesh Joshi: ಕರ್ನಾಟಕ ಸರ್ಕಾರ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ (Dr. Mahesh joshi) ಅವರಿಗೆ ಊಹಿಸಲಾಗದ ಶಾಕ್ ನೀಡಿದ್ದು, ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದೆ. ಈ ಬೆನ್ನಲ್ಲೇ ಮಂಡ್ಯದ ಬಾಡೂಟ ಕಾರ್ಯಕರ್ತರು ಜನರಿಗೆ ಕಬಾಬ್ ಹಂಚಿ ಸಂಭ್ರಮಿಸಿದ್ದಾರೆ.

ಹೌದು, ಮಹೇಶ್‌ ಜೋಶಿಯವರಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ಮತ್ತು ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸವಲತ್ತುಗಳನ್ನು ಸರ್ಕಾರ ನಿನ್ನೆಯಷ್ಟೇ ಹಿಂದಕ್ಕೆ ಪಡೆದು ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಮಂಡ್ಯ ಬಾಡೂಟ ಬಳಗದ ಕಾರ್ಯಕರ್ತರು ಚಿಕನ್‌ ಕಬಾಬ್‌ ಹಂಚಿ ತಿಂದು ಸಂಭ್ರಮಿಸಿದ್ದಾರೆ. ರಾಜ್ಯ ಸರ್ಕಾರದ ನಿಲುವನ್ನು ಸ್ವಾಗತಿಸಿದ ಬಾಡೂಟ ಬಳಗದವರು ಘೋಷಣೆಗಳನ್ನು ಕೂಗಿದ್ದಾರೆ.

ರಾಜ್ಯ ಸರ್ಕಾರದ ನಿಲುವನ್ನು ಸ್ವಾಗತಿಸಿದ ಬಾಡೂಟ ಬಳಗದವರು ಘೋಷಣೆಗಳನ್ನು ಕೂಗಿದರು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯ ಮುಖ್ಯಸ್ಥರಾಗಿ ಕನ್ನಡಪರ ಕೆಲಸಗಳಲ್ಲಿ ತೊಡಗಬೇಕಾದ ಜೋಶಿ ಅವರು ಬೈಲಾ ತಿದ್ದುಪಡಿ ಮೂಲಕ ಸರ್ವಾಧಿಕಾರಿಯಾಗಲು ಹೊರಟಿದ್ದರು’ ಎಂದು ಬಳಗದ ಎಂ.ಬಿ. ನಾಗಣ್ಣಗೌಡ ಆರೋಪಿಸಿದರು.

Comments are closed.