ಭಾರತದಲ್ಲಿ EV ಉತ್ಪಾದಿಸಲು ಟೆಸ್ಲಾಗೆ ಆಸಕ್ತಿ ಇಲ್ಲ: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ

New delhi: ಏಲಾನ್ ಮಸ್ಕ್ ರವರ ವಿದ್ಯುತ್ ವಾಹನ ಇವಿ ಕಂಪನಿ ಟೆಸ್ಲಾಗೆ ಭಾರತದಲ್ಲಿ ಕಾರುಗಳನ್ನು ಉತ್ಪಾದಿಸಲು ಆಸಕ್ತಿ ಇಲ್ಲ. ಆದರೆ ಅದು ದೇಶದಲ್ಲಿ ಶೋ ರೂಂಗಳನ್ನು ಆರಂಭಿಸಲು ಆಸಕ್ತಿ ತೋರಿವೆ ಎಂದು ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ.

ಅಮೆರಿಕಾದಲ್ಲಿ ಸುಂಕ ತಪ್ಪಿಸಲು ಭಾರತದಲ್ಲಿ ಟೆಸ್ಲಾ ಕಂಪನಿಯು ಭಾರತದಲ್ಲಿ ಕಾರ್ಖಾನೆಯನ್ನು ಸ್ಥಾಪಿಸಿದರೆ, ಅದು ಅಮೆರಿಕಕ್ಕೆ “ಅನ್ಯಾಯ” ಮಾಡಿದಂತೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಅದರಂತೆ ಭಾರತದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಭಾರತ ಆಸಕ್ತಿ ತೋರಿಲ್ಲ.
‘ಟೆಸ್ಲಾ ಕಂಪನಿಯು ಭಾರತದಲ್ಲಿ ಶೋ ರೂಂಗಳನ್ನು ಪ್ರಾರಂಭಿಸಲು ಮಾತ್ರವಷ್ಟೆ ಹೆಚ್ಚು ಆಸಕ್ತಿ ತೋರಿದೆ. ಅದು ಭಾರತದಲ್ಲಿ ಉತ್ಪಾದನೆ ಆರಂಭಿಸಲು ಆಸಕ್ತಿ ಹೊಂದಿಲ್ಲ ಎಂದು ಸಚಿವ ಕುಮಾರಸ್ವಾಮಿಯವರಿ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
Comments are closed.