Scholarship: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Share the Article

Scholarship: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವ ಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಹಾಗೂ ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp. karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004, 8050770005 ಅಥವಾ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Comments are closed.