Suhas Shetty ಕೊಲೆ ಪ್ರಕರಣ – ಇನ್ನೋರ್ವ ಆರೋಪಿಯ ಬಂಧನ

Shuhas Shetty Case: ಮಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತು ಅರವ ಆರೋಪಿಯನ್ನು ಬಂಧಿಸಿದ್ದಾರೆ.
ಬಜಪೆ ನಿವಾಸಿ ಅಬ್ದುಲ್ ರಜಾಕ್ ಎಂಬಾತನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಜಾಕ್ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದ ತನಿಖೆಯ ಮುಂದುವರಿದಿದೆ. ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
Comments are closed.