CM Siddaramaiah: 10 ಜನ ಆರ್‌ಸಿಬಿ ಅಭಿಮಾನಿಗಳು ಸಾವು: ಬೌರಿಂಗ್‌ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ

Share the Article

RCB Chinnaswamy Stadium: ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದು, ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮವನ್ನು ವೀಕ್ಷಿಸಲು ಬಂದಿದ್ದ 10 ಮಂದಿ ಆರ್ಸಿಬಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ.

ಸಂಭ್ರಮ ಹೋಗಿ ಕಾಲ್ತುಳಿತ ಉಂಟಾಗಿ ಈ ಕಾಲ್ತುಳಿತದಲ್ಲಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಆರಕ್ಕೂ ಹೆಚ್ಚು ಆರ್ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಕಾಲ್ತುಳಿತದಲ್ಲಿ ಅಸ್ವಸ್ಥಗೊಂಡವರನ್ನು ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೌರಿಂಗ್‌ ಆಸ್ಪತೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಹಾಗೂ ವೈದ್ಯರಿಂದಲೂ ಮಾಹಿತಿಯನ್ನು ಪಡೆದಿದ್ದಾರೆ.

Comments are closed.