Bangalore Stampede: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ, ಉಚಿತ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಘೋಷಣೆ

Bangalore Stampede: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಪಟ್ಟಂತೆ ಮೃತರ ಕುಟುಂಬಕ್ಕೆ ಸರಕಾರದಿಂದ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ದುರಂತದಲ್ಲಿ 11 ಜನ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಗಾಯಾಳುಗಳ ಆರೋಗ್ಯ ಸ್ಥಿತಿ ಗಂಭೀರವಾಗಿಲ್ಲ. ಎಲ್ಲಾ ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Comments are closed.