Vittla: ವಿಟ್ಲ: ಬಾಕ್ಸೆಟ್ ವಾಹನಗಳಿಗೆ ತಡೆ: ಹಲವರ ವಿರುದ್ಧ ಪ್ರಕರಣ ದಾಖಲು!

Vittla: ಘನ ವಾಹನಗಳಿಗೆ ತಡೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಹಲವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಜೂ. 2ರಂದು ರಾತ್ರಿ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ ಕೆಲವರು ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಹೋಗುವ ಲಾರಿಗಳನ್ನು 25 ರಿಂದ 30 ಜನರು ರಸ್ತೆಯಲ್ಲಿ ಘನ ವಾಹನಗಳು ಸಂಚರಿಸದಂತೆ ತಡೆದು ನಿಲ್ಲಿಸಿದ ಮಾಹಿತಿ ಬಂದ ಮೇರೆಗೆ, ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಈ ವೇಳೆ ಈಗಾಗಲೇ ರಸ್ತೆಯಲ್ಲಿ ಸಂಭವಿಸಿರುವ ಅಫಘಾತ ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು ಆರೋಪಿಗಳು ಘನ ವಾಹನಗಳು ಸಂಚರಿಸದಂತೆ ತಡೆಯೊಡ್ಡಿ, ಸದ್ರಿ ರಸ್ತೆಯಲ್ಲಿ ಯಾವುದೇ ಘನ ಲಾರಿಗಳನ್ನು ಸಂಚರಿಸಲು ಬಿಡುವುದಿಲ್ಲ ಎಂದು ವಾಹನಗಳನ್ನು ತಡೆಗಟ್ಟಿದ್ದಾರೆ ಎನ್ನಲಾಗಿದೆ.
Comments are closed.