Udupi: ಮಹಾಕವಿ ಕುಮಾರವ್ಯಾಸ-2025 ರಾಷ್ಟ್ರ ಪ್ರಶಸ್ತಿಗೆ ರಾಮಕೃಷ್ಣ ಶಿರೂರು ಆಯ್ಕೆ!

Share the Article

Udupi: ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಮಹಾಕವಿ ಕುಮಾರವ್ಯಾಸ 2025ರ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. 2025 ಜುಲೈ 20 ರಂದು ಧಾರವಾಡದ ರಂಗಾಯಣ ಸಭಾಭವನದಲ್ಲಿ ನಡೆಯುವ ಸಾಹಿತ್ಯ ಸಮಾವೇಶದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷಾ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ.

1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, 1995 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿರುವ ಇವರು ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Comments are closed.