Stadium Stamped: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ – ಮಂಡ್ಯದ ಯುವಕ ಸಾವು

Stadium Stamped: ಬೆಂಗಳೂರಿನಲ್ಲಿ RCB ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ 13 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ನೂಕುನುಗ್ಗಲಿನಲ್ಲಿ 18ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, 16 ಮಂದಿಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 9 ಅಭಿಮಾನಿಗಳು ಸಾವನ್ನಪ್ಪಿದ್ರೆ, ಅಸ್ವಸ್ಥರಾದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ದುರಂತದಲ್ಲಿ ರಾಯಸಮುದ್ರ ಗ್ರಾಮದ ಪೂರ್ಣಚಂದ್ರ(26) ಎಂಬ ಯುವಕ ಸಾವನ್ನಪ್ಪಿದ್ದಾನೆ.

ಮಂಡ್ಯದ ಕೆ.ಆರ್.ಪೇಟೆಯ ರಾಯಸಮುದ್ರ ಗ್ರಾಮದ ಪೂರ್ಣಚಂದ್ರ ಮೈಸೂರಿನ ಖಾಸಗಿ ಕಂಪನಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮ ಕಣ್ತುಂಬಿಕೊಳ್ಳಲು ಮೈಸೂರಿಂದ ಬೆಂಗಳೂರಿಗೆ ತೆರಳಿದ್ದ ಈ ನತದೃಷ್ಟ RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ ಅಸುನೀಗಿದಾನೆ. ಸಾವಿನ ಸುದ್ದಿ ಕೇಳಿ ಪೂರ್ಣಚಂದ್ರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Comments are closed.