RCB IPL Vicotry Stampede: ಆರ್ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ, ಮಗು ಸೇರಿ 10ಕ್ಕೇರಿದ ಮೃತರ ಸಂಖ್ಯೆ: ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ

RCB Chinnaswamy Stadium: ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದು, ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ವೀಕ್ಷಿಸಲು ಬಂದಿದ್ದ 10 ಮಂದಿ ಆರ್ಸಿಬಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಮೃತಪಟ್ಟಿದ್ದಾರೆ.

ಸಂಭ್ರಮ ಹೋಗಿ ಕಾಲ್ತುಳಿತ ಉಂಟಾಗಿ ಈ ಕಾಲ್ತುಳಿತದಲ್ಲಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಆರಕ್ಕೂ ಹೆಚ್ಚು ಆರ್ಸಿಬಿ ಅಭಿಮಾನಿಗಳ ಸ್ಥಿತಿ ಗಂಭೀರವಾಗಿದೆ. ಕಾಲ್ತುಳಿತದಲ್ಲಿ ಅಸ್ವಸ್ಥಗೊಂಡವರನ್ನು ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾಲ್ತುಳಿತದಲ್ಲಿ ಬೆಂಗಳೂರಿನ ಯಲಹಂಕದ ಓರ್ವ ಮಗು ಸಾವನ್ನಪ್ಪಿದೆ. ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಮಗುವಿನ ಮೃತದೇಹವಿದೆ. ಅಸ್ವಸ್ಥಗೊಂಡ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಮೂವರು ಮಹಿಳೆಯರು, ಮೂವರು ಪುರುಷರು ಸೇರಿದಂತೆ ಆರು ಮಂದಿ ಅಭಿಮಾನಿಗಳ ಮೃತದೇಹಗಳಿವೆ. ಮೃತರ ಸಂಬಂಧಿಕರ ಆಕ್ರಂದನ ಆಸ್ಪತ್ರೆಗಳ ಎದುರು ಮುಗಿಲು ಮುಟ್ಟಿದೆ.
Comments are closed.