Kadaba: ಕಡಬ: ದ್ವೇಷ ಭಾಷಣ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಪ್ರಕರಣ ದಾಖಲು!

Share the Article

Kadaba: ಜೂ.4ರಂದು ಕಡಬ (Kadaba) ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ನವೀನ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಬಗ್ಗೆ ಠಾಣಾ ಎಸ್.ಐ. ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ನವೀನ್ ನೆರಿಯ ಅವರು ತಮ್ಮ ಭಾಷಣದಲ್ಲಿ “ನೀವು ಪೊಲೀಸರು ರಾತ್ರಿ ಸಮಯ ಹಿಂದೂ ಮುಖಂಡರ ಮನೆಗೆ ಮಾತ್ರ ಹೋಗಿ ಪ್ರಮುಖರನ್ನು ಸರ್ಚ್ ಮಾಡಿ ಹಿಂದೂ ಧರ್ಮದ ಮುಖಂಡರಿಗೆ ಮಾತ್ರ ತೊಂದರೆಯನ್ನು ನೀಡುತ್ತಿದ್ದೀರಿ” ಎಂದು ದ್ವೇಷದ ಭಾಷಣವನ್ನು ಮಾಡಿ ಅಲ್ಲಿ ಸೇರಿದ್ದ ಸಾರ್ವಜನಿಕರಿಗೆ ಅನ್ಯಧರ್ಮದ ವಿರುದ್ಧ ದ್ವೇಷ ಭಾವನೆ ಹುಟ್ಟುವಂತೆ ಮಾಡಿರುತ್ತಾನೆ. ಈ ಹಿನ್ನಲೆಯಲ್ಲಿ ನವೀನ್ ನೆರಿಯ ಎಂಬಾತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಪ್ರಕರಣ ದಾಖಲಿಸಲಾಗಿದೆ.

Comments are closed.