IPL: ಐಪಿಎಲ್ ಬೆಟ್ಟಿಂಗ್ : ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿ ಸಹಿತ ಇಬ್ಬರು ಅರೆಸ್ಟ್!

IPL: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕೋಟ ಪೊಲೀಸರು ಜೂ.3ರಂದು ರಾತ್ರಿ 10ಗಂಟೆಗೆ ಸಾಯ್ಬರಕಟ್ಟೆ ರಿಕ್ಷಾ ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಶಿವರಾಜ್ (32) ಹಾಗೂ ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿ, ಶಿರಿಯಾರ ನಿವಾಸಿ ಪ್ರದೀಪ(37) ಎಂದು ಗುರುತಿಸಲಾಗಿದೆ.
ಇವರು ಕ್ರಿಕೆಟ್ ಬೆಟ್ಟಿಂಗ್ ವೆಬ್ಸೈಟ್ ಮೂಲಕ ಚಂದ್ರ ಜನ್ನಾಡಿ ಜೊತೆ ಸಂಘಟಿತವಾಗಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಆಟ ನಡೆಸುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಯಂತೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳು ವಶಕ್ಕೆ ಪಡೆದು ಕ್ರಿಕೆಟ್ ಬೆಟ್ಟಿಂಗ್ಗೆ ಬಳಸಿದ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Comments are closed.