Chinnaswamy Stadium: ಬೆಂಗಳೂರು ಕಾಲ್ತುಳಿತ ಪ್ರಕರಣ: 11 ಅಮಾಯಕರ ಸಾವು ಪ್ರಕರಣ: ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

Chinnaswamy Stadium: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರನ್ನು ನೀಡಲಾಗಿದೆ.

ಬೆಂಗಳೂರು ಕೊಟ್ಟಿಗೆಪಾಳ್ಯದ ನಿವಾಸಿ ಗಿರೀಶ್ ಕುಮಾರ್ ಅವರು ಬರೆದ ಸುದೀರ್ಫ ಪತ್ರದೊಂದಿಗೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಐಪಿಎಲ್-ಆರ್ಸಿಬಿ ವಿಜಯೋತ್ಸವಕ್ಕೆ ಸಾರ್ವಜನಿಕರನ್ನು ಸ್ವತಃ ಮುಖ್ಯಮಂತ್ರಿಗಳೇ ಆಹ್ವಾನಿಸಿದ್ದಾರೆ. ಸರಿಯಾದ ವ್ಯವಸ್ಥೆ ಮಾಡದೇ, ನಿರ್ಲಕ್ಷ್ಯ ವಹಿಸಿದ ಕಾರಣ ಅಮಾಯಕರ ಸಾವು-ನೋವಾಗಿದೆ. ಈ ಹಿನ್ನೆಲೆ ಸೂಕ್ತ ಕ್ರಮ ಜರುಗಿಸುವಂತೆ ಪ್ರದಲ್ಲಿ ಬರೆದು ಕೋರಿದ್ದಾರೆ.
Comments are closed.