Mangaluru: ದೇರಳಕಟ್ಟೆ: ಕಣಚೂರು ಆಸ್ಪತ್ರೆಗೆ ಬಾಂಬ್ ಬೆದರಿಕೆ ಪ್ರಕರಣ; ಆರೋಪಿಯ ಬಂಧನ..!

Share the Article

Mangaluru: ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ದಿನಾಂಕ : 04-06-2025 ರಂದು ಬೆಳಿಗ್ಗೆ 8-45 ಗಂಟೆಗೆ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್‌ ಸರಹದ್ದಿನ ದೇರಳಕಟ್ಟೆ ನಾಟೆಕಲ್ ರೋಡ್‌ನ ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿಯು ಕರೆ ಮಾಡಿ ಆಸ್ಪತ್ರೆಗೆ ಬಾಂಬ್ ಇರಿಸಲಾಗಿದೆ. 11-00 ಗಂಟೆಯೊಳಗಾಗಿ ಆಸ್ಪತ್ರೆಯನ್ನು ಖಾಲಿ ಮಾಡಬೇಕೆಂದು 5 ಬಾರಿ ಕರೆ ಮಾಡಿ ಬೆದರಿಕೆ ಹಾಕಿರುತ್ತಾರೆ. ಈ ಬೆದರಿಕೆಯ ಬಗ್ಗೆ ದೂರು ಬಂದ ಮೇರೆಗೆ 25-30 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಬಾಂಬ್ ನಿಷ್ಕ್ರಿಯ ತಂಡ ಹಾಗೂ ಶ್ವಾನ ದಳ ತಂಡದೊಂದಿಗೆ ಆಸ್ಪತ್ರೆಯ ಸಂಪೂರ್ಣ ಕಟ್ಟಡ ವನ್ನು ಹುಡುಕಾಡಿದ್ದಾರೆ.

ನಂತರ ತಂಡದವರು ಆರೋಪಿ ಪತ್ತೆಗೆ ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಿದಾಗ ತನಿಖೆಯಿಂದ ಪಿ.ಜಿ. ವಿದ್ಯಾರ್ಥಿನಿ ಡಾ//. ಶ್ರೀಮತಿ ಚಲಸಾನಿ ಮೋನಿಕಾ ಚೌಧರಿ ಆರೋಪಿಯಾಗಿದ್ದು, ಆಕೆ ವೈದ್ಯಕೀಯ ಕಾಲೇಜ್‌ನಲ್ಲಿ ಸ್ನಾತಕೋತರ ಪದವಿ ವ್ಯಾಸಂಗ ಮಾಡುತ್ತಿದ್ದು, ಬೆದರಿಕೆ ಹಾಕಿದ ದಿನಾಂಕದಂದು ನೀಡಬೇಕಾಗಿರುವುದರಿಂದ ಸಮಿನಾ‌ರ್ ತಪ್ಪಿಸುವ ಉದ್ದೇಶದಿಂದ ಎಸಗಿರುವುದು ತನಿಖೆಯಿಂದ ವಿದ್ಯಾರ್ಥಿನಿ ತಿಳಿದು ಬಂದಿದೆ. ಆರೋಪಿಯನ್ನು ದಿನಾಂಕ : 07-06-2025 ರಂದು ದಸ್ತಗಿರಿ ಮಾಡಿ, ಅವರ ಹೇಳಿಕೆ ಮೇಲೆ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿದೆ.

Comments are closed.