Kadaba: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ: ಹಲವರಿಗೆ ಗಾಯ

Share the Article

Kadaba: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ನಸುಕಿನ ಸಮಯದಲ್ಲಿ ಖಾಸಗಿ ಬಸ್‌ ಪಲ್ಟಿಯಾಗಿ ಹಲವರು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು ಜೂನ್‌ 7 ರಂದು ನಡೆದಿದೆ.

ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ MERCY ಹೆಸರಿನ ಖಾಸಗಿ ಬಸ್‌ ನಸುಕಿನ ಸಮಯ 3.30 ರ ವೇಳೆ ಗುಂಡ್ಯ ಸಮೀಪ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.

ಈ ಘಟನೆಯಲ್ಲಿ ಹೆಚ್ಚಿನ ಮಂದಿ ಗಾಯಗೊಂಡಿದ್ದು, ಚಾಲಕ ಸೇರಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಗೂ ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ಬಸ್ಸಿನಲ್ಲಿ ಪ್ರಯಾಣಿಕರು ನಿದ್ರೆ ಮಂಪರಿನಲ್ಲಿದ್ದು, ಹಬ್ಬದ ನಿಮಿತ್ತ ಕೆಲವು ಊರಿಗೆ ಬರುತ್ತಿದ್ದರು ಎಂದು ವರದಿಯಾಗಿದೆ. ವೇಗದ ಚಾಲನೆಯೇ ಬಸ್‌ ಪಲ್ಟಿಗೆ ಕಾರಣ ಎನ್ನಲಾಗುತ್ತಿದ್ದು ಹೆಚ್ಚಿನ ವಿವರ ಲಭಿಸಿಲ್ಲ.

ಪುತ್ತೂರು ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.