H D Kumaraswamy: ರಾಜ್‌ಕುಮಾರ್‌ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ?- ಬೇಳೂರು ಗೋಪಾಲಕೃಷ್ಣ

Share the Article

H D Kumaraswamy: ಮಾಧ್ಯಮಗಳ ಜೊತೆ ಮಾತನಾಡುತ್ತಾ, ಬೆಂಗಳೂರಿನಲ್ಲಿ ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ “ಸಿಎಂ ರಾಜೀನಾಮೆ ಕೇಳುವ ಕುಮಾರಸ್ವಾಮಿ ಅವರಿಗೆ ನಾಚಿಕೆ ಆಗಬೇಕು. ಡಾ.ರಾಜ್‌ಕುಮಾರ್‌ ತೀರಿಕೊಂಡಾಗ 4 ಜನರಿಗೆ ಗುಂಡು ಹೊಡೆಸಿದ್ರಲ್ಲ, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ” ಎಂದು ಪ್ರಶ್ನೆ ಎತ್ತಿದ್ದಾರೆ.

ಡಾ. ರಾಜ್‌ಕುಮಾರ್ ತೀರಿಕೊಂಡಾಗ ನಾಲ್ಕು ಜನರಿಗೆ ಗುಂಡೇಟು ಹೊಡೆಸಿದ್ರು.‌ ಕಂಠೀರವ ಸ್ಟುಡಿಯೋದಲ್ಲಿ ಆಗ ನಾನೂ ಇದ್ದೆ. ಆಗ ಕುಮಾರಸ್ವಾಮಿ ರಾಜೀನಾಮೆ ನೀಡಿದ್ರಾ..? ಹಾವೇರಿಯಲ್ಲಿ ರೈತರ ಮೇಲೆ ಬಿಎಸ್‌ವೈ ಗೋಲಿಬಾರ್ ಮಾಡಿಸಿದ್ರು, ರಾಜೀನಾಮೆ ನೀಡಿದ್ರಾ..? ಪಹಲ್ಗಾಮ್ ಉಗ್ರರ ದಾಳಿಯಲ್ಲಿ 26 ಮಂದಿ ಸತ್ರು, ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ಆಗಿ ಹಲವರು ಸತ್ರು. ಪ್ರಧಾನಿ ಮೋದಿ ಅಮಿತ್ ಶಾ ರಾಜೀನಾಮೆ ನೀಡಿದ್ರಾ..? ಮೋದಿ, ಶಾ ರಾಜೀನಾಮೆ ಕೊಡಿಸಲಿ, ನಾವೂ ಕೂಡ ಸಿಎಂ, ಡಿಸಿಎಂ ರಾಜೀನಾಮೆ ಕೊಡಿಸ್ತೀವಿ ಅಂತ ಹೇಳಿದ್ದಾರೆ.

Comments are closed.