Kadaba: ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ: ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Kadaba: ರೈಲ್ವೇ ಹಳಿಯಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ ಮಾಡಿದ ಘಟನೆ ಕೋಡಿಂಬಾಳದ ಬಳಿ ನಡೆದಿದೆ.
ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವ್ಯಕ್ತಿಗೆ ಸುಟ್ಟ ಗಾಯವಾಗಿದ್ದು, ಹನುಮಪ್ಪ (45) ಎಂದು ಗುರುತಿಸಲಾಗಿದೆ. ಗದಗ ಮೂಲದವರಾದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದು, ಇವರಿಬ್ಬರು ಜೂ.8 ರ ಮಧ್ಯಾಹ್ನ ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದರು.
ರೈಲು ಹೋದ ನಂತರ ಹನುಮಪ್ಪನನ್ನು ತಮ್ಮ ನಿಂಗಪ್ಪ 500 ಮೀ ಮುಂದಕ್ಕೆ ಕರೆದುಕೊಂಡು ಬಂದಿದ್ದು, ಕೈಯಲ್ಲಿದ್ದ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿರುವುದಾಗಿ ತಿಳಿದು ಬಂದಿದೆ.
ಸ್ಥಳೀಯರು ಈತನ ಕಿರುಚಾಟ ಕೇಳಿ ಬಂದಾಗ ವ್ಯಕ್ತಿ ಗಂಭೀರ ಸ್ಥಿತಿಯಲ್ಲಿದ್ದ. ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ಕೊಂಡೊಯ್ಯಲಾಗುತ್ತಿದೆ. ಕಡಬ ಪೊಲೀಸರು ಸ್ಥಳಕ್ಕೆ ಬಂದಿದ್ದು, ಬೆಂಕಿ ಹಚ್ಚಿರುವ ಲಿಂಗಪ್ಪನನ್ನು ವಶಕ್ಕೆ ಪಡೆದಿದ್ದಾರೆ.
Comments are closed.