Mangalore: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ: ಎನ್‌ಐಎ ತನಿಖೆಗೆ-ಕೇಂದ್ರ ಗೃಹ ಇಲಾಖೆ ಆದೇಶ

Share the Article

Mangaluru: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಗೃಹಸಚಿವಾಲಯ ರಾಷ್ಟೀಯ ತನಿಖಾ ದಳ ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್‌ಐಎ ಪ್ರಕರಣದ ತನಿಖೆ ನಡೆಸಲಿದೆ.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಮನವಿಯಲ್ಲಿ ಸಲ್ಲಿಕೆ ಮಾಡಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್‌, ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸದ್ದರು.

Comments are closed.