Karnataka: ಕರ್ನಾಟಕದಲ್ಲಿ ಜೂನ್ 11 ರಿಂದ ಮತ್ತೆ ಮಳೆ ಆರ್ಭಟ; ಈ ಜಿಲ್ಲೆಗಳಲ್ಲಿ ಹೈ ಅಲರ್ಟ್!

Karnataka: ಕರ್ನಾಟಕದಲ್ಲಿ (Karnataka) ಮೇ ಅಂತ್ಯದಲ್ಲೇ ಮಾನ್ಸೂನ್ ಪ್ರವೇಶಿಸಿತ್ತು. ಇದೀಗ ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆ ಇದೀಗ ಕಡಿಮೆಯಾಗಿ ಬಿಸಿಲು ಹೆಚ್ಚಾಗಿದೆ. ಆದ್ರೆ ಕರ್ನಾಟಕದಲ್ಲಿ ಜೂ.11ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಜೂನ್ 9ರಿಂದಲೇ ಮತ್ತೆ ಮಳೆಯಾಗಲಿದ್ದು, ಜೂನ್ 11ರಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ. ಮುಂದಿನ 7 ದಿನಗಳ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಜೂನ್ 9ರಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಹಳದಿ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ರಾಜ್ಯಗಳಾದ ಕೇರಳ, ಕರಾವಳಿ ಕರ್ನಾಟಕದಲ್ಲಿ ವಾರವಿಡೀ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ:
ಶಿವಮೊಗ್ಗ, ಹಾಸನದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರಿನ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಮತ್ತು ಮೈಸೂರು, ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆ, ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ಮುಂಬೈ, ದೆಹಲಿ/ಎನ್ಸಿಆರ್, ಕೊಲ್ಕತ್ತಾ, ಚೆನ್ನೈ, ಅಸ್ಸಾಂ, ಒಡಿಶಾದಲ್ಲಿ ಕೂಡ ಭಾರೀ ಮಳೆಯಾಗಲಿದೆ. ಜೂನ್ 8ರಂದು ಪೂರ್ವ ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ, ಜೂನ್ 11 ಮತ್ತು 12ರಂದು ಜಮ್ಮು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
Comments are closed.