Nandi Hills: ನಂದಿ ಬೆಟ್ಟಕ್ಕೆ 5 ದಿನ ಪ್ರವಾಸಿಗರಿಗೆ ನೋ ಎಂಟ್ರಿ

Share the Article

Nandi Hills: 2025 ನೇ ಸಾಲಿನ 13 ನೇ ರಾಜ್ಯ ಸಚಿವ ಸಂಪುಟದ ಸಭೆ ಜೂನ್‌ 19 ರಂದು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂನ್‌ 16 ರ ಸಂಜೆ 6 ಗಂಟೆಯಿಂದ ಜೂನ್‌ 20 ರ ನಸುಕಿನ 5 ರವರೆಗೆ ಸಾರ್ವಜನಿಕರಿಗೆ ನಂದಿ ಬೆಟ್ಟಕ್ಕೆ ಬರದಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್‌ ಆದೇಶ ಹೊರಡಿಸಿದ್ದಾರೆ.

ಜೂನ್‌ 17 ರಿಂದ 19 ರವರೆಗೆ ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳ ಬುಕಿಂಗ್‌ ರದ್ದು ಮಾಡಲಾಗಿದೆ.

Comments are closed.