Karnataka: ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

Share the Article

Karnataka: ಕರ್ನಾಟಕ (Karnataka) ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಲ್ಲಿ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿ, ದ್ವಿತೀಯ ಪಿಯುಸಿ., ಡಿಪ್ಲೋಮ, ಪದವಿ, ಎಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು. ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ/ಆದಾಯ ಮಿತಿ ಇರುವುದಿಲ್ಲ. ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ/ಆದಾಯ ರೂ.8 ಲಕ್ಷಗಳಿಗಿಂತ ಕಡಿಮೆ ಇರಬೇಕು. ಅರ್ಜಿದಾರರು https://www.kaushalkar.com/ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು.

ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು(ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್‍ಸೈಟ್ www.kaad.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004 ಅಥವಾ 8050770005 ಸಂಪರ್ಕಿಸಬಹುದು. ಸೇವಾಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ ಮಡಿಕೇರಿ ಇವರನ್ನು ದೂರವಾಣಿ ಸಂಖ್ಯೆ 08272-221656 ಮುಖಾಂತರ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Comments are closed.