Bantwala: ಬಂಟ್ವಾಳ: ವಿಶ್ವಾಸ ಗಳಿಸಿ ಅಡಿಕೆ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ವಂಚನೆ! ಕೃಷಿಕರಿಂದ ದೂರು ದಾಖಲು!

Share the Article

Bantwala: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಂದ ವಿಶ್ವಾಸ ಗಳಿಸಿ, ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ (Bantwala) ನಗರ ಪೋಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ.ಇಂದು ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯ ಮುಂದೆ ಜಮಾಯಿಸಿದ್ದು, ವಂಚನೆಗೆ ಒಳಗಾದ ಕೃಷಿಕರು ಹಣ ನೀಡದೆ ವಂಚಿಸಿದ ವ್ಯಕ್ತಿಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.

ಸ್ಥಳೀಯ ಕೃಷಿಕ ಮಹಿಳೆಯೊಬ್ಬರು ತಮ್ಮ ಬ್ಯಾಂಕ್‌ ಸಾಲದ ಮೊತ್ತ ಪಾವತಿಯ ಹಿನ್ನಲೆಯಲ್ಲಿ ವ್ಯಾಪಾರಿಯ ಬಳಿ ಹಣಕ್ಕಾಗಿ ಹೋದಾಗ ಆತ ಪರಾರಿಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಕೃಷಿಕರೆಲ್ಲರು ಒಂದಾಗಿ ಆತನ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. ಕಳೆದ ಎರಡು ಮೂರು ದಶಕಗಳಿಂದ ಆತ ಯಾವುದೇ ರೀತಿಯಲ್ಲಿ ವಂಚಿಸದೆ ಕೃಷಿಕರ ಅಗತ್ಯಕ್ಕೆ ತಕ್ಕಂತೆ ಹಣ ನೀಡುತ್ತಿದ್ದ ಎನ್ನಲಾಗಿದೆ. ಆದರೆ ಈ ಬಾರಿ ಒಬ್ಬೊಬ್ಬ ಕೃಷಿಕನಿಗೆ ಲಕ್ಷಾಂತರ ರೂ ಹಣ ವಂಚನೆ ಮಾಡಿದ್ದು ಒಟ್ಟು ಮೊತ್ತ 10 ಕೋಟಿ ಆಗಬಹುದೆಂದು ಕೃಷಿಕರು ಆರೋಪಿಸಿದ್ದಾರೆ.

Comments are closed.