Highcourt: ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್: ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ

Highcourt: ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ನಿಂದ ಬಿಗ್ ರಿಲೀಫ್ ದೊರಕಿದೆ. ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ ಭಾರತ ತೊರೆಯುವಂತಿಲ್ಲ ಎಂದು ಆದೇಶ ಹೊರಡಿಸಿದ ಕೋರ್ಟ್ ಪಾಸ್ಪೋರ್ಟ್ ವಶಕ್ಕೆ ನೀಡಲು ಸೂಚನೆ ನೀಡಿದೆ. ಹಾಗೂ 10 ಲಕ್ಷ ರೂ. ಗಳ 2 ಶ್ಯೂರಿಟಿ ನೀಡಬೇಕು ಎಂದು ಕೋರ್ಟ್ ಆದೇಶ ಹೊರಡಿಸಿದೆ.
Comments are closed.