Murder: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ನ ಬರ್ಬರ ಹತ್ಯೆ!

Murder: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್‌ನನ್ನು ಬರ್ಬರವಾಗಿ ಹತ್ಯೆ (Murder) ಮಾಡಿರುವ ಘಟನೆ ಆಳಂದ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ನಡೆದಿದೆ

ಕೊಲೆಯಾದ ವ್ಯಕ್ತಿಯನ್ನು ಸುಧಾಕರ್ (32) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ಸಹೋದರನ ಜೊತೆ ಬೈಕ್ ಮೇಲೆ ತೆರಳುವಾಗ ದುಷ್ಕರ್ಮಿಗಳು ದಾಳಿ ನಡೆಸಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆಯಲ್ಲಿ ಸುಧಾಕರನ ಸಹೋದರನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಳೆ ವೈಶಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Comments are closed.