School trip: ಆಟೋರಿಕ್ಷಾಗಳಲ್ಲಿ ನಿಗಧಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಸೂಚನೆ

Share the Article

School trip: ಉಡುಪಿ ಜಿಲ್ಲೆಯಲ್ಲಿ ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋರಿಕ್ಷಾಗಳಲ್ಲಿ ನಿಗಧಿಪಡಿಸಿದ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಎಲ್ಲಾ ಆಟೋರಿಕ್ಷಾ ಚಾಲಕ ಮತ್ತು ಮಾಲಕರು ಕ್ರಮವಹಿಸಬೇಕು.

ಖಾಸಗಿ ವಾಹನಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಂದ ಬಾಡಿಗೆ ಪಡೆದು ಬಾಡಿಗೆ ಮಾಡದಂತೆ ಎಲ್ಲಾ ಖಾಸಗೀ ವಾಹನಗಳ ಮಾಲಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ಅಂತಹ ವಾಹನಗಳು, ಚಾಲಕರು ಹಾಗೂ ಮಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Comments are closed.