Manjeshwara: ಮಂಜೇಶ್ವರ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ ಆರೋಪಿ ಸೆರೆ!

Manjeshwara: ಮಂಜೇಶ್ವರ (Manjeshwara) ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ಪರಾರಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಹೊಸಬೆಟ್ಟು ನಿವಾಸಿ ಸಿದ್ದೀಕ್ ಸಾರಿಕ್ ಫರ್ಹಾನ್ (29) ಸೋಮವಾರ ಮುಂಜಾನೆ ಲಾಕಪ್ ನಿಂದ ಈತ ಪರಾರಿಯಾಗಿದ್ದ. ಕೂಡಲೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಆತನನ್ನು ಮತ್ತೆ ಬಂಧಿಸಿದ್ದಾರೆ.
ಫರ್ಹಾನ್ 2019ರ ಮೇ 25ರಂದು ಕುಂಜತ್ತೂರು ತೂಮಿನಾಡು ಎಂಬಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದ ಆರೋಪಿಯಾಗಿದ್ದಾನೆ. ಅಲ್ಲದೇ ಈತನ ವಿರುದ್ಧ ವಾರಂಟ್ ಹೊರಡಿಸಲಾಗಿತ್ತು.
Comments are closed.