RCB: RCB ಮಾರಟ ಮಾಡುವ ಬಗ್ಗೆ ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ!

Share the Article

RCB: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು (RCB) ಡಿಯಾಜಿಯೊ ಮಾರಾಟ ಮಾಡುತ್ತಿಲ್ಲ ಎಂದು ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್ ಅಧಿಕೃತವಾಗಿ ತಿಳಿಸಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಳಿಕ ಆರ್‌ಸಿಬಿ ಷೇರನ್ನು ಡಿಯಾಜಿಯೊ ಮಾರಾಟ ಮಾಡಲಿದೆ ಎಂಬ ವದಂತಿ ಸುದ್ದಿಗಳು ಪ್ರಕಟವಾದ ಬೆನ್ನಲ್ಲೇ ಇಂದು ಬಾಂಬೆ ಸ್ಟಾಕ್‌ ಎಕ್ಸ್‌ಚೆಂಜ್‌ ಈಮೇಲ್‌ ಮೂಲಕ ಸ್ಪಷ್ಟನೆ ಕೇಳಿತ್ತು.

ಈ ಪ್ರಶ್ನೆಗೆ ಉತ್ತರ ನೀಡಿದ ಯುನೈಟೆಡ್ ಸ್ಪಿರಿಟ್ಸ್, ಆರ್‌ಸಿಬಿಯ ಮಾರಾಟಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳ ಊಹಾತ್ಮಕ ಸ್ವರೂಪದ್ದಾಗಿವೆ. ಅಂತಹ ಯಾವುದೇ ಚರ್ಚೆಗಳನ್ನು ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದೆ.

Comments are closed.