CM Siddaramiah : RCB ವಿಜಯೋತ್ಸವಕ್ಕೆ ರಾಜ್ಯಪಾಲರನ್ನು ಕರೆಸಿದ್ದು ಯಾರು? ಕೊನೆಗೂ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

CM Siddaramiah ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜನಸ್ತೋಮ ಸೇರಿದಾಗ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾರ್ಯಕ್ರಮ ಆಯೋಜಿಸಿದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ರಾಜ್ಯಪಾಲರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕೂ ಕೂಡ ಬಾರಿ ಜನಾಕ್ರೋಶ ವ್ಯಕ್ತವಾಗಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಯಾರು ಎಂಬ ವಿಚಾರ ಚರ್ಚೆಯಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಯಾರು ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೆ.ಗೋವಿಂದರಾಜು ಮೂಲಕ ರಾಜ್ಯಪಾಲರನ್ನು ನಾನು ಕರೆದಿದ್ದೇನೆ. ಎಂಎಲ್ಸಿ ಕೆ.ಗೋವಿಂದರಾಜು ಮೂಲಕ ಕರೆ ಮಾಡಿಸಿ ಕರೆಸಿದ್ದೆ. ನಾನು ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ನೀವೂ ಬನ್ನಿ ಎಂದು ಕರೆದೆ. ಬೆಳಗ್ಗೆ 11.19ಕ್ಕೆ KSCA ಕಾರ್ಯದರ್ಶಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ರು ಎಂದು ಸ್ಪಷ್ಟಪಡಿಸಿದ್ದಾರೆ.
Comments are closed.