Puttur: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 500 ಮನೆ ಮಂಜೂರು ಮಾಡಿ: ವಸತಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Puttur: ಪುತ್ತೂರು (Puttur) ವಿಧಾನಸಭಾ ಕ್ಷೇತ್ರದಲ್ಲಿ ತೀರಾ ಹಿಂದುಳಿದವರ ಮನೆ ಹೆಚ್ಚಿದ್ದು, ಸ್ವಂತ ಖರ್ಚಿನಿಂದ ಮನೆ ನಿರ್ಮಾಣ ಮಾಡಲು ಸಾಧ್ಯವಿಲ್ಲದ ನೂರಾರು ಕುಟುಂಬಗಳು ಅರ್ಜಿ ಸಲ್ಲಿಸಿದ್ದು ಅವರಿಗೆ ಮನೆ ನೀಡಲು ಪುತ್ತೂರು ಕ್ಷೇತ್ರಕ್ಕೆ 500 ಮನೆಗಳನ್ನು ಮಂಜೂರು ಮಾಡುವಂತೆ ವಸತಿ ಸಚಿವ ಜಮೀರ್ ಅಹ್ಮದ್‌ಗೆ ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.

ಬುಧವಾರ ಸಚಿವರನ್ನು ಭೇಟಿಯಾದ ಶಾಸಕರು, ಮನೆ ಇಲ್ಲದವರು ನನ್ನ ಕ್ಷೇತ್ರದಲ್ಲಿ ಅನೇಕ ಮಂದಿ ಇದ್ದಾರೆ. ಹತ್ತು ವರ್ಷಗಳ ಹಿಂದೆ ಮನೆಗಾಗಿ ಅರ್ಜಿ ಹಾಕಿದವರೂ ಇದ್ದಾರೆ. ಹಿಂದಿನ ಸರಕಾರ ಇದ್ದಾಗ ಒಂದೇ ಒಂದು ಮನೆ ಮಂಜೂರಾಗದ ಕಾರಣ ಅರ್ಜಿಗಳ ಸಂಖ್ಯೆಯೂ ಹೆಚ್ಚಿದೆ. ತೀರಾ ಹಿಂದುಳಿದ ವರಿಗೆ ಮನೆ ಕೊಡಿಸುವಲ್ಲಿ ಸಚಿವರಿಗೆ ೫೦೦ ಮನೆ ನೀಡುವಂತೆ ಕೇಳಿದ್ದೇನೆ. ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Comments are closed.