Kundapura: ವಿವಾಹಿತ ಮಹಿಳೆ ನಾಪತ್ತೆ ಪ್ರಕರಣ – ಪ್ರಿಯಕರನೊಂದಿಗೆ ಪರಾರಿ?

Share the Article

Kundapura : ಕುಂದಾಪುರದಲ್ಲಿ ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಚರ್ಚ್ ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾಗಿತ್ತು. ಇದೀಗ ಈ ಪ್ರಕರಣಕ್ಕೆ ಬಿದ್ದು ಟ್ವಿಸ್ಟ್ ಸಿಕ್ಕಿದೆ

 

ಹೌದು, ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33) ಎಂಬುವವರು ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ರು. ಇವರ ಪತಿ ವಿದೇಶದಲ್ಲಿದ್ದು ಎರಡು ಮಕ್ಕಳು ಹಾಗೂ ತಾಯಿಯೊಂದಿಗೆ ಕುಂದಾಪುರ ವಿಠಲವಾಡಿಯಲ್ಲಿ ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಕುಂದಾಪುರ ಚರ್ಚ್ ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆ ಯಾಗಿ, ಈ ಕುರಿತು ಇದೀಗ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಈಗ ಈ ಪ್ರಕರಣ ಬೇರೆ ತಿರುವು ಪಡೆದುಕೊಂಡಿದ್ದು ಮಹಿಳೆಯು ತನ್ನ ಪ್ರಿಯಕರೊಂದಿಗೆ ಓಡಿ ಹೋಗಿದ್ದಾಳೆ ಎಂದು ತಿಳಿದು ಬಂದಿದೆ.

Comments are closed.