Ahemedabad Plane Crash: ಅಹಮದಾಬಾದ್ ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿಯಲಿಲ್ಲ! ಸಿಬ್ಬಂದಿ ಸೇರಿದಂತೆ ಎಲ್ಲಾ 242 ಜನರ ದುರ್ಮರಣ!

Ahemedabad Plane Crash: ಗುಜರಾತ್‌ನ ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್‌ಇಂಡಿಯಾ ವಿಮಾನ ಪತನಗೊಂಡಿದೆ. ವಿಮಾನದಲ್ಲಿದ್ದ ಎಲ್ಲರೂ ಸಾವಿಗೀಡಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿ ಅಧಿಕೃತ ಮಾಹಿತಿ ನೀಡಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲರೂ ಸಾವಿಗೀಡಾಗಿದ್ದಾರೆ ಎಂದು ತಿಳಿಸಿದೆ.

ಅಹಮದಾಬಾದ್ ವಿಮಾನ ಅಪಘಾತದಲ್ಲಿ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ – ಎಪಿ
ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿಯ ಪ್ರಕಾರ, ವಿಮಾನದಲ್ಲಿದ್ದ ಎಲ್ಲಾ 242 ಜನರು ಸಾವನ್ನಪ್ಪಿದ್ದಾರೆ. ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ.
“ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿದಿಲ್ಲ ಎಂದು ತೋರುತ್ತದೆ” ಎಂದು ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದರು. ವಿಮಾನವು ವಸತಿ ಪ್ರದೇಶದಲ್ಲಿ ಪತನಗೊಂಡಿರುವುದರಿಂದ, ಕೆಲವು ಸ್ಥಳೀಯರು ಸಹ ಸಾವನ್ನಪ್ಪಿರಬಹುದು ಎಂದು ಅವರು ಹೇಳಿದರು.
Comments are closed.