David Warner : ಅಹಮದಾಬಾದ್ ವಿಮಾನ ದುರಂತ – ವಿಮಾನ ಪ್ರಯಾಣದ ಕುರಿತು ಮಹತ್ವದ ನಿರ್ಧಾರ ತೆಗೆದುಕೊಂಡ ಡೇವಿಡ್ ವಾರ್ನರ್!!

David Warner: ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, ಘಟನೆಯಲ್ಲಿ 242 ಪ್ರಯಾಣಿಕರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಇಡಿ ವಿಶ್ವವೇ ವಿಷಾದ ವ್ಯಕ್ತಪಡಿಸಿದೆ. ಈ ಬೆನ್ನಲ್ಲೇ ಕ್ರಿಕೆಟ್ ದಿಗ್ಗಜ ಡೇವಿಡ್ ವಾರ್ನರ್ ಮಹಾತ್ಮನ ನಿರ್ಧಾರವನ್ನು ಕೈಗೊಂಡಿದ್ದಾರೆ.
ಹೌದು, ಅಹ್ಮದಾಬಾದ್ ವಿಮಾನ ದುರಂತದ ಬಳಿಕ ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ವಾರ್ನರ್, ಈ ವಿಮಾನ ದುರಂತದಿಂದ ಆಘಾತಕ್ಕೊಳಗಾಗಿದ್ದು, ಇನ್ನು ಮುಂದೆ ಏರ್ ಇಂಡಿಯಾ ವಿಮಾನದಲ್ಲಿ (Air India boycott) ಪ್ರಯಾಣ ಬೆಳೆಸದಿರಲು ನಿರ್ಧಾರಿಸಿದ್ದಾರೆ.
ಈ ಕುರಿತಾಗಿ ಪೋಸ್ಟ್ ಹಂಚಿಕೊಂಡ ಅವರು ‘ಮೊದಲನೆಯದಾಗಿ, ಅವರು ಇಡೀ ಘಟನೆಯನ್ನು ದುಃಖಕರ ಎಂದು ಕರೆದಿದ್ದಾರೆ. ಮುಂದುವರೆದು, ನಾನು ನನ್ನ ಇಡೀ ಕುಟುಂಬದೊಂದಿಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಲು ಉದ್ದೇಶಿಸಿದ್ದೆ, ಆದರೆ ಇನ್ನು ಮುಂದೆ ಅದು ಸಾಧ್ಯವಿಲ್ಲ. ನಾನು ಮತ್ತೆ ಎಂದಿಗೂ ಏರ್ ಇಂಡಿಯಾದಲ್ಲಿ ಪ್ರಯಾಣಿಸುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.
Comments are closed.