High court : ಓಲಾ, ಉಬರ್, ಬೈಕ್ ಟ್ಯಾಕ್ಸಿಗಳಿಗೆ ಹೈ ಕೋರ್ಟ್ ಶಾಕ್ – ಸೋಮವಾರದಿಂದ ರಾಜ್ಯದಲ್ಲಿ ಎಲ್ಲವೂ ಬಂದ್

High court : ಕರ್ನಾಟಕ ಹೈಕೋರ್ಟ್ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್ ಕೊಟ್ಟಿದೆ. ಏನೆಂದರೆ ಸೋಮವಾರದಿಂದ (ಜೂ.16) ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸಂಪೂರ್ಣ ಬ್ಯಾನ್ ಆಗುತ್ತಿದೆ. ಈಗಾಗಲೇ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ ಬೈಕ್ ಟ್ಯಾಕ್ಸಿಗೆ ಅನುವು ಮಾಡಿಕೊಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇಷ್ಟೇ ಅಲ್ಲ ಆದೇಶವನ್ನು ಎತ್ತಿಹಿಡಿದಿದೆ.
ಹೌದು, ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಈ ಮೂಲಕ ಓಲಾ, ಉಬರ್, ರಾಪಿಡೊ, ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡಲು ಹೈಕೋರ್ಟ್ ಅನುಮತಿ ನೀಡಿದೆ.
ಅಂದಹಾಗೆ ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ, ಬೈಕ್ ಟ್ಯಾಕ್ಸಿ ಪರ ಮಧ್ಯಂತರ ಆದೇಶ ನೀಡಲು ನಿರಾಕಿರಿಸಿದ್ದು, ಮೇಲ್ಮನವಿ ಅರ್ಜಿಗಳನ್ನು ಜೂ.24ರಂದು ಅಂತಿಮವಾಗಿ ತೀರ್ಮಾನಿಸಲಾಗುವುದು ಎಂದಿದೆ. ಹೀಗಾಗಿ ಜೂನ್ 16ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಇರುವುದಿಲ್ಲ.
Comments are closed.