Ramanagar: ಕೆರೆಯಲ್ಲಿ ಶವವಾಗಿ ಪತ್ತೆಯಾದ ಮೆಡಿಕಲ್ ವಿದ್ಯಾರ್ಥಿನಿ

Ramanagar: ರಾಮನಗರ ಜಿಲ್ಲೆಯ ಸಿಂಗರಾಜಿಪುರ ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಮಹಾಲಕ್ಷ್ಮೀ (20) ಮೃತ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮೀ ರಾಮನಗರದ ಇನ್ಸ್‌ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಇಂದು ಸಿಂಗರಾಜಿಪುರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಐಡಿ ಕಾರ್ಡ್, ಬ್ಯಾಗ್ ಕೆರೆಯ ದಡದಲ್ಲಿ ಪತ್ತೆಯಾಗಿದೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಅನುಮಾನಗೊಂಡು ಕೆರೆಯಲ್ಲಿ ಹುಡುಕಾಡಿದಾಗ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.