Weather Report: ನಾಳೆ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಉತ್ತಮ ಮಳೆ ಮುಂದುವರಿಕೆ

Share the Article

Weather Report: ಕರಾವಳಿ – ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಜೂನ್ 14ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್ 19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 18ರ ತನಕ ಸಾಮಾನ್ಯ ಮುಂಗಾರು ಮುಂದುವರಿಯುವ ಲಕ್ಷಣಗಳಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜೂನ್ 18ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ಉತ್ತರ ಒಳನಾಡು ಉತ್ತರ ಭಾಗ ಹಾಗೂ ದಕ್ಷಿಣ ಮಹಾರಾಷ್ಟ್ರ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ ಉತ್ತರ ಒಳನಾಡಿನ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ.

ನಂತರ ಮುಂಗಾರು ಯಥಾಸ್ಥಿತಿಗೆ ಮರಳುವ ಸಾಧ್ಯತೆಯಿದೆ. ( ನೈರುತ್ಯದಿಂದ ಈಶಾನ್ಯಕ್ಕೆ).

ಜೂನ್ 14ರಿಂದ ಕೊಡಗು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ನಿರೀಕ್ಷೆ ಇದೆ.

Comments are closed.